KA / :G-GPO / 2515 / WPP-47 / 2009-2011
ಕರ್ನಾಟಕ ರಾಜ್ಯಪತ್ರ
ಅಧಿಕೃತವಾಗಿ ಪ್ರಕಟಿಸಲಾದುದು
ಸಂಪುಟ ೧೪೫ ಬೆಂಗಳೂರು, ಗುರುವಾರ, ನವೆಂಬರ್ ೧೮, ೨೦೧೦ (ಕಾರ್ತೀಕ ೨೭, ಶಕ ವರ್ಷ ೧೯೩೨) ಸಂಚಿಕೆ ೪೫
ಭಾಗ - ೫
ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಹಾಸನ
ನೇಮಕಾತಿ ಪ್ರಕಟಣೆ
ಅಧಿಸೂಚನೆ ಸಂಖ್ಯೆ: 2/2010, ದಿನಾಂಕ:23ನೇ ಅಕ್ಟೋಬರ್, 2010
ವಿಷಯ: ಹಾಸನದ ತ್ವರಿತ ವಿಲೇವಾರಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಮೂರು ಶೀಘ್ರಲಿಪಿಗಾರರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ಬಗ್ಗೆ.
ಉಲ್ಲೇಖ: 1) ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರ ಸಂಖ್ಯೆ: ಜಿಓಬಿ(1) 585/2000 ದಿನಾಂಕ:03.12.2003 ರೊಂದಿಗೆ ಲಗತ್ತಿಸಿರುವ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಇವರ ಕಛೇರಿಯಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ನಡವಳಿಕೆಗಳು.
2) ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರ ಸಂಖ್ಯೆ: ಜಿಓಬಿ(1) 585/2000 ದಿನಾಂಕ:20.02.2004 ರೊಂದಿಗೆ ಲಗತ್ತಿಸಿರುವ ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಎಲ್ಎಡಬ್ಲ್ಯೂ 152 ಎಲ್ಸಿಇ 02, ಬೆಂಗಳೂರು ದಿನಾಂಕ:19.02.2004.
ಹಾಸನ, ಚನ್ನರಾಯಪಟ್ಟಣ ಮತ್ತು ಅರಕಲಗೂಡಿನ ತ್ವರಿತ ವಿಲೇವಾರಿ ನ್ಯಾಯಾಲಯಗಳಲ್ಲಿ ಖಾಲಿಯಿರುವ ಮೂರು ಶೀಘ್ರಲಿಪಿಗಾರರ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಈ ಅಧಿಸೂಚನೆಗೆ ಲಗತ್ತಿಸಲಾಗಿರುವ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ನಿಗದಿ ಮಾಡಿದ ಕೊನೆಯ ದಿನಾಂಕ:25.11.2010
ಸಂಜೆ.5.00 ಗಂಟೆ
| ಕ್ರಮ ಸ ಂಖ್ಯೆ | ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ಸ ಂಚಿತ ವೇತನ |
| 1. | ಶೀಘ್ರಲಿಪಿಗಾರರು | 3 | ಮಾಹೆಯಾನ ರೂ.7250\00 |
ವಿದ್ಯಾರ್ಹತೆ:
ಅ) ಶೀಘ್ರಲಿಪಿಗಾರರು: ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಶೀಘ್ರಲಿಪಿಗಾರರು.
ಅಥವಾ
(ಅ) ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
( ೩೩೫೭ )
ಕರ್ನಾಟಕ ರಾಜ್ಯಪತ್ರ, ಗುರುವಾರ, ನವೆಂಬರ್ ೧೮, ೨೦೧೦ ಭಾಗ - ೫ ೩೩೫೮(ಆ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಡದರ್ಜೆ (Senior Grade) ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಡದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆ: ಅಭ್ಯರ್ಥಿಗಳಿಗೆ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಅವಧಿಯಂತೆ ಅಂದರೆ ತಲಾ 2 1/2 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನ ನೀಡಲಾಗುವುದು ಹಾಗೂ ಅದನ್ನು 45 ನಿಮಿಷಗಳ ಅವಧಿಯಲ್ಲಿ (22 1/2 ನಿಮಿಷಗಳಲ್ಲಿ ಕನ್ನಡ ಹಾಗೂ 221/2 ನಿಮಿಷಗಳಲ್ಲಿ ಆಂಗ್ಲ ಭಾಷೆಯಲ್ಲಿ) ತರ್ಜುಮೆ ಮಾಡಿ ಬೆರಳಚ್ಚು ಮಾಡುವುದು.
ಪ್ರಮುಖ ಸೂಚನೆಗಳು:
1) ನಿವೃತ್ತ ನೌಕರರು ತಮ್ಮ ಅರ್ಜಿಯೊಂದಿಗೆ ತಮ್ಮ ನಿವೃತ್ತಿಗೆ ಸಂಬಂಧಿಸಿದ ದಾಖಲಾತಿಗಳನ್ನು ಲಗತ್ತಿಸತಕ್ಕದ್ದು. 2) ಅರ್ಜಿಯ ಮೇಲೆ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಒಂದು ಭಾವಚಿತ್ರವನ್ನು ಅಂಟಿಸತಕ್ಕದ್ದು. 3) ಅರ್ಜಿಯೊಂದಿಗೆ ವಿದ್ಯಾರ್ಹತೆ, ಜನ್ಮ ದಿನಾಂಕವನ್ನು ಸೂಚಿಸುವ ದಾಖಲೆ, ಅಂಕಪಟ್ಟಿ ಇವುಗಳ ಸ್ವಯಂ-ದೃಡೀಕೃತ ಪ್ರತಿಗಳನ್ನು ಲಗತ್ತಿಸತಕ್ಕದ್ದು.
4) ಅರ್ಜಿಯಲ್ಲಿರುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡತಕ್ಕದ್ದು. ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 5) ಭರ್ತಿ ಮಾಡಿದ ಅರ್ಜಿಯೊಂದಿಗೆ 6-00 ರೂ.ಗಳ ಅಂಚೆ ಚೀಟಿ ಅಂಟಿಸಿದ ಸ್ವ-ವಿಳಾಸದ ಲಕೋಟೆಯನ್ನು ಲಗತ್ತಿಸತಕ್ಕದ್ದು. 6) ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 7) ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು. 8) ತಿರಸ್ಕøತ ಅರ್ಜಿಗಳ ಬಗ್ಗೆ ಅಥವಾ ಸಂದರ್ಶನಕ್ಕೆ ಅನರ್ಹರಾದ ಬಗ್ಗೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. 9) ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಯಾವುದೇ ಸಂದರ್ಭದಲ್ಲಾದರೂ ತೆಗೆದುಹಾಕುವ ನಿಬಂಧನೆಗೆ ಒಳಗಾಗಿರುತ್ತವೆ.
ಕೆ. ಸೋಮಶೇಖರ್
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ಹಾಸನ.
ಅರ್ಜಿ ನಮೂನೆ
ಗೆ:
ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು,
ಹಾಸನ.
ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಬೇಕು.
ಮಾನ್ಯರೆ,
ತಮ್ಮ ನ್ಯಾಯಾಲಯದ ಅಧಿಸೂಚನೆ ಸಂಖ್ಯೆ: 2/2010, ದಿನಾಂಕ:23.10.2010ರ ಪ್ರಕಟಣೆಯ ಮೇರೆಗೆ ನಾನು ಕೆಳಕಂಡ ಮಾಹಿತಿಗಳೊಂದಿಗೆ ಹಾಸನ ಘಟಕದ ತ್ವರಿತಗತಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಆಯ್ಕೆ ಬಯಸಿ ನನ್ನ ಅರ್ಜಿಯನ್ನು
| 1. | ಅಭ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | ||||
| 2. | ತಂದೆಯ: ತಾಯಿಯ: ಗಂಡನ ಹೆಸರು | ||||
| 3. | ಪೂರ್ಣ ವಿಳಾಸ | ||||
| 4. | ಹುಟ್ಟಿದ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ವಯಸ್ಸು (ಸೂಕ್ತ ದಾಖೆಯನ್ನು ಲಗತ್ತಿಸತಕ್ಕದ್ದು) | ||||
| 5. | ಲಿಂಗ | ಗಂಡು | ಹೆಣ್ಣು | ||
| 6. | ಜಾತಿ | ||||
| 6. | ವಿದ್ಯಾರ್ಹತೆ | ಉತ್ತೀರ್ಣರಾದ ವರ್ಎ ಮತ್ತು ತಿಂಗಳು | ಗರಿಎ್ಠ ಅಂಕಗಳು | ಪಡೆದ ಅಂಕಗಳು | |
| ಅ. | 10ನೇ ತರಗತಿ | ||||
| ಆ. | ಕನ್ನಡ ಶೀಘ್ರಲಿಪಿ ಪ್ರೌಡದರ್ಜೆ | ||||
| ಆ. | ಆಂಗ್ಲ ಶೀಘ್ರಲಿಪಿ ಪ್ರೌಡದರ್ಜೆ | ||||
| ಇ. | ಕನ್ನಡ ಬೆರಳಚ್ಚು ಪ್ರೌಡ ದರ್ಜೆ | ||||
| ಈ. | ಆಂಗ್ಲ ಬೆರಳಚ್ಚು ಪ್ರೌಡ ದರ್ಜೆ | ||||
| 7. | ಇತರೆ ಹೆಚ್ಚುವರಿ ವಿದ್ಯಾರ್ಹತೆ | ||||
| 8. | ಯಾವುದಾದರೂ ಅಪರಾಧದಲ್ಲಿ ಬ ಾಗಿಯಾಗಿರುವರೇ? | ||||
| 8. | ನೀವು ನಿವೃತ್ತ ಸರ್ಕಾರಿ ನೌಕರರೇ? ಹೌದಾದರೆ, ಪಿಂಚಣಿ ಆದೇಶವನ್ನು ಲಗತ್ತಿಸತಕ್ಕದ್ದು. | ||||
| 9. | ಲಗತ್ತಿಸಿರುವ ದಾಖಾತಿಗಳು |
ದಿನಾಂಕ:
ಸ್ಥಳ:
ಅಭ್ಯರ್ಥಿಯ ಸಹಿ.
ಪಿ.ಆರ್.736
ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರ ಕಛೇರಿ, ಕರ್ನಾಟಕ ರಾಜ್ಯ, ನಂ.17, ಜಯನಿವಾಸ, ಶಂಕರಮಠ ರಸ್ತೆ,
ಬಸವನಗುಡಿ, ಬೆಂಗಳೂರು-560 004
ನೇಮಕಾತಿ ಅಧಿಸೂಚನೆ
ಅಧಿಸೂಚನೆ ಸಂಖ್ಯೆ: ಸಿಬ್ಬಂದಿ-2/ನೇಮಕಾತಿ/18/2004-05, ದಿನಾಂಕ:25ನೇ ಅಕ್ಟೋಬರ್, 2010
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಬ್ಯಾಕ್ಲಾಗ್ ಹುದ್ದೆಗಳಿಗೆ ವಿಶೇಷ ನೇಮಕಾತಿ
ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯಲ್ಲಿ 02 ಶೀಘ್ರಲಿಪಿಗಾರರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ (ಮಹಿಳಾ ಅಭ್ಯರ್ಥಿ)/ ಪರಿಶಿಷ್ಟ ಪಂಗಡ (ಇತರೆ) ಅಭ್ಯರ್ಥಿಗಳಿಂದ ಮಾತ್ರ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿದ ಅರ್ಜಿ ನಮೂನೆಯ ಬೆರಳಚ್ಚು ಪ್ರತಿ: ಗಣಕೀಕೃತ ಪ್ರತಿಯಲ್ಲಿಯೇ ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲಾ ಅಂಕಣಗಳನ್ನು ಜಾಗರೂಕತೆಯಿಂದ ಭರ್ತಿ ಮಾಡಿ ಸಲ್ಲಿಸತಕ್ಕದ್ದು.
ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:18.12.2010
| ಕ್ರಮ ಸ ಂಖ್ಯೆ | ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ಹುದ್ದೆಯ ವರ್ಗೀಕರಣ |
| 1. | ಶೀಘ್ರಲಿಪಿಗಾರರು | 02 | ಪರಿಶಿಎ್ಟ ಜಾತಿ\ ಮಹಿಳಾ ಅಭ್ಯರ್ಥಿ ಪರಿಶಿಎ್ಟ ಪಂಗಡ\ ಇತರೆ ಅಭ್ಯರ್ಥಿ |
ವಿದ್ಯಾರ್ಹತೆ:
1) ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 2) ಕನ್ನಡ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಪ್ರೌಡದರ್ಜೆ ಬೆರಳಚ್ಚು ಮತ್ತು ಕನ್ನಡ ಪ್ರೌಡದರ್ಜೆ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕನ್ನಡ ಶೀಘ್ರಲಿಪಿ ಆಯ್ಕೆ ವಿಷಯದೊಂದಿಗೆ ಕರ್ನಾಟಕ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೇಟರಿಯಲ್ ಪ್ರಾಕ್ಟೀಸ್ ವಿಷಯದಲ್ಲಿ ಡಿಪ್ಲೊಮ ವಿದ್ಯಾರ್ಹತೆ ಪಡೆದಿರಬೇಕು. ಕನ್ನಡ ಶೀಘ್ರಲಿಪಿಯಲ್ಲಿ ಪ್ರಾವೀಣ್ಯ (Proficiency) ದರ್ಜೆಯ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಶೇಕಡಾ 05 ರಷ್ಟು ಮಾನ್ಯ (Weightage) ಅಂಕಗಳನ್ನು ಅಭ್ಯರ್ಥಿಯು ನಿಗದಿಪಡಿಸಿದ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾ ಅಂಕಗಳಿಗೆ ಸೇರಿಸಲಾಗುವುದು.
ವಯೋಮಿತಿ:
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : 40 ವರ್ಷ
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವೇತನ ಶ್ರೇಣಿ:
ರೂ.7275-175-7800-200-8600-225-9500-250-10500-300-12300-350-13350
ಆಯ್ಕೆ ವಿಧಾನ:
ಅಭ್ಯರ್ಥಿಗಳ ಆಯ್ಕೆ ಕರ್ನಾಟಕ ಸರ್ಕಾರಿ ಸೇವಾ (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಮೀಸಲಿಟ್ಟ ಭರ್ತಿಯಾಗದ ರಿಕ್ತ ಸ್ಥಾನಗಳು (ವಿಶೇಷ ನೇಮಕಾತಿ) ನಿಯಮಗಳು 2001ರ ಉಪಬಂಧಗಳನ್ವಯ ನಡೆಯುತ್ತದೆ.
ಪ್ರಾಮುಖ್ಯವಾದ ಸೂಚನೆಗಳು:
ಅಭ್ಯರ್ಥಿಗಳು ಕೆಳಕಂಡ ಪ್ರಮಾಣ ಪತ್ರಗಳ ಒಂದೊಂದು ಛಾಯಾ (Xerox) ಪ್ರತಿಗಳನ್ನು ಸ್ವದೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಬೇಕು.
ಕರ್ನಾಟಕ ರಾಜ್ಯಪತ್ರ, ಗುರುವಾರ, ನವೆಂಬರ್ ೧೮, ೨೦೧೦ ಭಾಗ - ೫ ೩೩೬೦1) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು. 2) ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ/ ವರ್ಗಾವಣೆ ಪ್ರಮಾಣ ಪತ್ರ/ ಜನನ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಯ ಉದೃತ ಭಾಗ.
3) ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಪತ್ರಗಳು ಪ್ರಸ್ತುತ ಚಾಲ್ತಿಯಲ್ಲಿರುವ ನಮೂನೆಗಳಲ್ಲಿ. 4) ಶಾಲಾ/ ಕಾಲೇಜಿನ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರಿಂದ ಪಡೆದ ಒಂದು ನಡತೆ ಪ್ರಮಾಣ ಪತ್ರ ಹಾಗೂ ಸ್ಥಳೀಯ ಇಬ್ಬರು ಗಣ್ಯವ್ಯಕ್ತಿಗಳಿಂದ ಪಡೆದ ಇತ್ತೀಚಿನ ನಡತೆ ಪ್ರಮಾಣ ಪತ್ರ.
5) ಶುಲ್ಕ: ಶುಲ್ಕದಿಂದ ವಿನಾಯಿತಿ ಇರುತ್ತದೆ.
ಇತರೆ ಸೂಚನೆಗಳು:
1) ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ಮೇಲಾಧಿಕಾರಿಗಳಿಂದ ಪಡೆದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಲಗತ್ತಿಸತಕ್ಕದ್ದು.
2) ಅರ್ಜಿಯೊಂದಿಗೆ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಒಂದು ಭಾವಚಿತ್ರವನ್ನು ಸ್ವದೃಡೀಕರಿಸಿ, ಲಗತ್ತಿಸಬೇಕು. 3) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಸಾರ್ವಜನಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ, ಆ ದಿನಾಂಕದ ಮಾರನೆಯ ಕೆಲಸದ ದಿನವು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗುವುದು.
4) ಅರ್ಜಿ ಮತ್ತು ಲಗತ್ತುಗಳು ಹೊಂದಿರುವ ಲಕೋಟೆಯ ಮೇಲೆ ``ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಬ್ಯಾಕ್ಲಾಗ್ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ'' ಎಂದು ದಪ್ಪ ಅಕ್ಷರಗಳಲ್ಲಿ ನಮೂದಿಸಬೇಕು.
ವಿಶೇಷ ಸೂಚನೆ:
1) ನ್ಯೂನತೆಯುಳ್ಳ, ಅಪೂರ್ಣ ಮತ್ತು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ನಿರ್ದೇಶಕರು.
ಅರ್ಜಿ ನಮೂನೆ
ಬ್ಯಾಕ್ಲಾಗ್ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ
ರವರಿಗೆ:
ಸಹಕಾರ ಸಂಘಗಳ ಲೆಕ್ಕಪರಿಶೋಧನಾ
ನಿರ್ದೇಶಕರು, ನಂ.17, ಜಯನಿವಾಸ,
ಶಂಕರಮಠ ರಸ್ತೆ, ಬಸವನಗುಡಿ,
ಸ್ವದೃಡೀಕರಿಸಿದ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಬೇಕು.
ಬೆಂಗಳೂರು-560 004.
ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆ: ಸಿಬ್ಬಂದಿ-2/ನೇಮಕಾತಿ/18/2004-05, ದಿನಾಂಕ:25.10.2010ರ ಪ್ರಕಟಣೆಯ ಮೇರೆಗೆ ನಾನು
| 1. | ಅಭ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | |||
| 2. | ತಂದೆಯ/ ತಾಯಿಯ/ ಗಂಡನ/ಹೆಂಡತಿಯ ಹೆಸರು | |||
| 3. | ಖಾಯಂ ವಿಳಾಸ | |||
| 4. | ಈಗಿನ ಅಂಚೆ ವಿಳಾಸ (ಪತ್ರ ವ್ಯವಹಾರಕ್ಕಾಗಿ) | |||
| 5. | ಲಿಂಗ | ಪುರುಎ/ ಸ್ತ್ರೀ | ||
| 6. | ಜನ್ಮ ದಿನಾಂಕ ಮತ್ತು ವಯಸ್ಸು (ಪ್ರಮಾಣ ಪತ್ರ ಲಗತ್ತಿಸುವುದು) | |||
| 7. | ರಾಷ್ಟ್ರೀಯತೆ, ಮತ | |||
| 8. | ಜಾತಿ ಮತ್ತು ಉಪಜಾತಿ (ದಾಖೆ ಲಗತ್ತಿಸುವುದು) | |||
| 9. | ಶೈಕ್ಷಣಿಕ ವಿದ್ಯಾರ್ಹತೆ (ಸ್ವದೃಡೀಕರಿಸಿದ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು) (1) 10ನೇ ತರಗತಿ (2) ಕನ್ನಡ ಶೀಘ್ರಲಿಪಿ ಪ್ರೌಡದರ್ಜೆ (3) ಕನ್ನಡ ಬೆರಳಚ್ಚು ಪ್ರೌಡದರ್ಜೆ | ಉತ್ತೀರ್ಣರಾದ ವರ್ಎ ಮತ್ತು ತಿಂಗಳು | ಗರಿಎ್ಠ ಅಂಕಗಳು | ಪಡೆದ ಅಂಕಗಳು |
| 9. | ವಿವಾಹಿತರೆ/ ಅವಿವಾಹಿತರೆ (ವಿವಾಹಿತರಾಗಿದ್ದಲ್ಲಿ, ಒಂದಕ್ಕಿಂತ ಹೆಚ್ಚು ಜೀವಂತ ಪತಿ/ಪತ್ನಿಯನ್ನು ಹೊಂದಿದ್ದಾರೆಯೇ? | |||
| 10. | ಉದ್ಯೋಗಿಯಾಗಿದ್ದಲ್ಲಿ, ವಿವರೆಗಳು. (ಮೇಾಧಿಕಾರಿಗಳಿಂದ ಪಡೆದ ನಿರಾಕ್ಷೇಪಣಾ ಪ್ರಮಾಣ ಪತ್ರ ಲಗತ್ತಿಸುವುದು) | |||
| 11. | ಯಾವುದಾದರೂ ಅಪರಾಧಗಳಿಗೆ ಶಿಕ್ಷೆಗೆ ಒಳಪಟ್ಟಿರುತ್ತೀರಾ? |
ಈ ಮೇಲ್ಕಂಡ ಮಾಹಿತಿಗಳು ನನಗೆ ತಿಳಿದ ಮಟ್ಟಿಗೆ ಸತ್ಯ ಮತ್ತು ಸರಿಯಾಗಿವೆಯೆಂದು ಪ್ರಮಾಣೀಕರಿಸುತ್ತೇನೆ ಮತ್ತು ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡುಬಂದಲ್ಲಿ, ನನ್ನ ಅಭ್ಯರ್ಥಿತನವನ್ನು ರದ್ದುಪಡಿಸಬಹುದು ಎಂದು ಈ ಮೂಲಕ ಘೋಷಿಸುತ್ತೇನೆ. ದಿನಾಂಕ: ಸ್ಥಳ:
ಅಭ್ಯರ್ಥಿಯ ಸಹಿ.
ಪಿ.ಆರ್.737
ಕರ್ನಾಟಕ ಸರ್ಕಾರ
ನೋಂದಣಿ ಮತ್ತು ಮುದ್ರಾಂಕ ಇಲಾಖೆ
ನೇಮಕಾತಿ ಆದೇಶ
ವಿಷಯ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಜವಾನರ (ಡಿ-ಗ್ರೂಪ್) ಬ್ಯಾಕ್ಲಾಗ್ ಹುದ್ದೆಗಳಲ್ಲಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ.
ಉಲ್ಲೇಖ:1) ಸರ್ಕಾರದ ಅಧಿಸೂಚನೆ ಸಂಖ್ಯೆ: ಡಿಪಿಎಆರ್ 13 ಎಸ್ಬಿಸಿ 2001 ದಿನಾಂಕ:21.11.2001 ರನ್ವಯ ಪ್ರಕಟಿಸಿರುವ ಬ್ಯಾಕ್ಲಾಗ್ ನೇಮಕಾತಿ ನಿಯಮಗಳು 2001 (ದಿನಾಂಕ:22.11.2001 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ) 2) ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಇವರ ಅಲಾಟ್ಮೆಂಟ್ ಆದೇಶ ಸಂಖ್ಯೆ:
EST-2-235/2003-04 ದಿನಾಂಕ:21.09.2010.
ಪ್ರಸ್ತಾವನೆ: ಈ ಇಲಾಖೆಯ ಕೆಳಕಂಡ ಜಿಲ್ಲೆಯಲ್ಲಿ (ಡಿ-ಗ್ರೂಪ್) ಜವಾನರ ವೃಂದದಲ್ಲಿ ಕೆಳಕಂಡಂತೆ ಬ್ಯಾಕ್ಲಾಗ್ ಹುದ್ದೆಗಳನ್ನು ಗುರುತಿಸಿ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಇವರಿಗೆ ವರದಿ ಮಾಡಲಾಗಿತ್ತು.
| ಕ್ರ.ಸಂ. | ಜ್ಲಿೆ | ಸ ದರಿ ಜ್ಲಿೆಯಲ್ಲಿ ಗುರುತಿಸಲ್ಪಟ್ಟ ಬ್ಯಾಕಾ್ಗ್ ಹುದ್ದೆಗಳ ಸಂಖ್ಯೆ | ||
| ಪ ರಿಶಿ(್ಟ ಜಾತಿ | ಪ ರಿಶಿ(್ಟ ಪಂಗಡ | ಒಟ್ಟು | ||
| 1. | ಶಿವಮೊಗ್ಗ ಜಿೆ ್ಲ | ಎರಡು | ಒಂದು | ಮೂರು |
ಮೇಲೆ ಗುರುತಿಸಿದ ಬ್ಯಾಕ್ಲಾಗ್ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕೆಳಕಂಡ ಅಭ್ಯರ್ಥಿಯನ್ನು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಇವರು ಅವರ ಉಲ್ಲೇಖ (2)ರ ಅಲಾಟ್ಮೆಂಟ್ ಆದೇಶದಲ್ಲಿ ಈ ಜಿಲ್ಲೆಗೆ ಅಲಾಟ್ ಮಾಡಿ ಕೆಳಕಂಡ ಅಭ್ಯರ್ಥಿಯನ್ನು ಈ ಜಿಲ್ಲೆಯಲ್ಲಿ ಜವಾನರೆಂದು ನೇಮಕ ಮಾಡಿಕೊಳ್ಳುವಂತೆ ನಿರ್ದೇಶಿಸಿದ್ದರ ಮೇರೆ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.
ಆದೇಶ ಸಂಖ್ಯೆ: ಜಿನೋಶಿ/ EST-2/2010-11/84, ದಿನಾಂಕ:20ನೇ ಅಕ್ಟೋಬರ್, 2010 ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಉಲ್ಲೇಖ (1)ರ ಬ್ಯಾಕ್ಲಾಗ್ ನಿಯಮಗಳನ್ವಯ ಪ್ರದತ್ತವಾದ ಅಧಿಕಾರದ ಮೇರೆಗೆ ಉಲ್ಲೇಖ (2)ರಲ್ಲಿನ ಅಲಾಟ್ಮೆಂಟ್ ಆದೇಶದಲ್ಲಿ ಕಂಡುಬಂದ ಕೆಳಕಂಡ ಬ್ಯಾಕ್ಲಾಗ್ ಅಭ್ಯರ್ಥಿಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಈ ಜಿಲ್ಲೆಯಲ್ಲಿ ಖಾಲಿ ಇರುವ ಜವಾನರ ಹುದ್ದೆಯಲ್ಲಿ ಕೆಳಕಂಡ ಷರತ್ತುಗಳಿಗೆ ಒಳಪಡಿಸಿ ರೂ.4800-100-6000- 125-6500-150-7100-175-7275ರ ವೇತನ ಶ್ರೇಣಿಯಲ್ಲಿ ತಾತ್ಕಾಲಿಕವಾಗಿ ಜವಾನರೆಂದು ನೇಮಕ ಮಾಡಲಾಗಿದೆ. ಹಾಗೂ ಕೆಳಕಂಡ ಅಭ್ಯರ್ಥಿಯನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಕಛೇರಿಗೆ ಜವಾನರೆಂದು ಸ್ಥಳ ನಿಯುಕ್ತಿಗೊಳಿಸಿದೆ.
| ಕ್ರ. ಸ ಂ. | ಅಭ್ಯರ್ಥಿಯ ಹೆಸರು ಮತ್ತು ವಿಳಾಸ | SC / ST | ಜನ್ಮ ದಿನಾಂಕ | 3ಖ7ಖ2004ರ ಅಂತ್ಯಕ್ಕೆ ಅಭ್ಯರ್ಥಿಯ ವ ಯಸ್ಸು ವ ಖತಿಂಖದಿ | ವಿದ್ಯಾರ್ಹತೆ ಮತ್ತು ಶ ೕಕಡವಾರು ೆ ಅಂಕಗಳು | ಅಭ್ಯರ್ಥಿಯನ್ನು ಜವಾನರೆಂದು ನೇಮಕ ವ iಾಡಿದ ಕಛೇರಿ | ಅಭ್ಯರ್ಥಿಯನ್ನು ಯಾವ ಮೀಸಾತಿ ಅಡಿಯಲ್ಲಿ ವ ುತ್ತು ಯಾವ ವ ರ್ಗೀಕರಣದ ಅಡಿಯಲ್ಲಿ ನೇಮಕ ವ iಾಡಾಗಿದೆಯೋ ಅದರ ವಿವರ |
| 1 | 2 | 3 | 4 | 5 | 6 | 7 | 8 |
| 1. | ಯಶೋಧ W/o T. ಸುರೇಶನಾಯ್ಕ ಪಾವಸ್ಕರ್ ಸಂಕೀರ್ಣ NH 17 ಗ್ರಾಮ ಯಡ್ತರೆ, ಬ ೖಂದೂರು ಅಂಚೆ, ೆ ಕುಂದಾಪುರ ತಾಲ್ಲೂಕು, ಉಡುಪಿ ಜಿ್ಲೆ. | SC | 24\02\1975 | 29\04\09 | ಏಳನೇ ತರಗತಿ 80.500 | ಉಪ ನೋಂದಣಿ ಕಛೇರಿ, ಹೊಸನಗರ, ಶಿವಮೊಗ್ಗ ಜಿೆ ್ಲ | ಪರಿಶಿಎ್ಟ ಜಾತಿ ಮಹಿಳಾ ಅಭ್ಯರ್ಥಿ ಮುಖ್ಯಪಟ್ಟಿ |
ಈ ನೇಮಕಾತಿ ಆದೇಶವು ಕೆಳಕಂಡ ಷರತ್ತುಗಳಿಗೆ ಒಳಪಟ್ಟಿರುತ್ತದೆ. ಮತ್ತು ಅಭ್ಯರ್ಥಿಗಳು ಈ ಕೆಳಕಂಡ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
ಷರತ್ತುಗಳು:
1) ಈ ನೇಮಕಾತಿಯು ತಾತ್ಕಾಲಿಕವಾಗಿದ್ದು ಸದರಿ ಅಭ್ಯರ್ಥಿಯನ್ನು ಯಾವುದೇ ನೋಟೀಸ್ ಅಥವಾ ಕಾರಣ ನೀಡದೇ ಯಾವುದೇ ಘಳಿಗೆಯಲ್ಲಾದರೂ ಕೆಲಸದಿಂದ ತೆಗೆದು ಹಾಕುವ ಷರತ್ತಿಗೆ ಒಳಪಟ್ಟು ನೇಮಕಾತಿ ಮಾಡಲಾಗಿದೆ.
2) ಈ ನೇಮಕಾತಿ ಆದೇಶವು ಯಾವುದೇ ಸಂದರ್ಭದಲ್ಲಾದರೂ ತಿದ್ದೋಲೆ ಮತ್ತು ಮಾರ್ಪಾಡಿಗೆ ಒಳಪಟ್ಟಿರುತ್ತದೆ. 3) ಸದರಿ ಅಭ್ಯರ್ಥಿಯನ್ನು ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977 ರಲ್ಲಿನ ನಿಬಂಧನೆಗಳಿಗೆ ಒಳಪಡಿಸಿ ಮತ್ತು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷದ ಪರೀಕ್ಷಾರ್ಥ ಅವಧಿಗೆ ಒಳಪಡಿಸಿ ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ.
4) ಎರಡು ವರ್ಷದ ಪರೀಕ್ಷಾರ್ಥ ಅವಧಿಯಲ್ಲಿ ಅಭ್ಯರ್ಥಿಗಳು ತಮ್ಮ ವರ್ಗಾವಣೆಗಾಗಿ ರಾಜಕೀಯ ಅಥವಾ ಇನ್ಯಾವುದೇ ರೀತಿಯ ಒತ್ತಡ ತಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಶಿಸ್ತು ಕ್ರಮ ಜರುಗಿಸಲಾಗುವುದು.
5) ನೇಮಕಾತಿ ಮಾಡಿರುವ ಸ್ಥಳದ ಅಥವಾ ಕಛೇರಿಯ ಮಾರ್ಪಾಡಿಗಾಗಿ ಯಾವುದೇ ಮನವಿಗಳನ್ನು ಯಾವುದೇ ಕಾರಣಕ್ಕಾಗಲೀ ಪುರಸ್ಕರಿಸಲಾಗುವುದಿಲ್ಲ.
6) ಈ ನೇಮಕಾತಿಯು ಆಗಿಂದಾಗ್ಗೆ ಜಾರಿಯಲ್ಲಿರುವ ಸೇವಾ ಷರತ್ತುಗಳು ನಿಯಮ ಮತ್ತು ಆದೇಶಗಳಿಗೆ ಒಳಪಡುತ್ತದೆ. ಹಾಗೂ ಸದರಿ ಅಭ್ಯರ್ಥಿಗಳು ಕೆ.ಸಿ.ಎಸ್.ಆರ್. ಮತ್ತು ಕೆ.ಸಿ.ಎಸ್ (ನಡತೆ) ನಿಯಮಗಳು 1966ರಲ್ಲಿನ ಮತ್ತು ಕೆ.ಸಿ.ಎಸ್. (ಸಿ.ಸಿ.ಎ.) ನಿಯಮಗಳು 1957ರಲ್ಲಿನ ಹಾಗೂ ಆಗಿಂದಾಗ್ಗೆ ಜಾರಿಗೆ ಬರುವ ಹಾಗೂ ಜಾರಿಯಲ್ಲಿರುವ ಇತರೆ ಸೇವಾ ಷರತ್ತುಗಳಿಗೆ ಮತ್ತು ನಿಬಂಧನೆಗಳಿಗೆ ಒಳಪಡುತ್ತಾರೆ.
7) ಈ ಆದೇಶ ಮುಟ್ಟಿದ 15 (ಹದಿನೈದು) ದಿನಗಳ ಅವಧಿಯೊಳಗೆ ಅಭ್ಯರ್ಥಿಯು ಕೆಲಸಕ್ಕೆ ಹಾಜರಾಗತಕ್ಕದ್ದು ಒಂದು ವೇಳೆ ನಿಗದಿತ ಅವಧಿಯೊಳಗೆ ಕೆಲಸಕ್ಕೆ ಹಾಜರಾಗದಿದ್ದಲ್ಲಿ ಈ ನೇಮಕಾತಿ ರದ್ದಾಗುವುದು ಹಾಗೂ ನೇಮಕಾತಿ ಬಗ್ಗೆ ಅಭ್ಯರ್ಥಿಯು ಯಾವ ಹಕ್ಕನ್ನೂ ಹೊಂದಿರುವುದಿಲ್ಲವೆಂದು ತಿಳಿಯತಕ್ಕದ್ದು.
8) ಅಭ್ಯರ್ಥಿಗಳು ಅವರ ಕಾರ್ಯ, ಕರ್ತವ್ಯ ಮತ್ತು ಪ್ರಕಾರ್ಯಗಳನ್ನು ಶ್ರದ್ದೆ, ಭಕ್ತಿ ಮತ್ತು ಆಸಕ್ತಿಯಿಂದ ತೃಪ್ತಿಕರವಾಗಿ ಮಾಡತಕ್ಕದ್ದು. 9) ಅಭ್ಯರ್ಥಿಗಳು ಅವರ ದುರ್ವರ್ತನೆಯಿಂದ, ದುರ್ನಡತೆಯಿಂದ ಹಾಗೂ ಉದಾಸೀನತೆಯಿಂದ ನಿರ್ಲಕ್ಷತೆಯ ನಿಮಿತ್ತ ಸರ್ಕಾರಕ್ಕೆ ಸಂಬಂಧಿಸಿದಂತೆ ಉಂಟುಮಾಡುವ ಎಲ್ಲಾ ರೀತಿಯ ಆರ್ಥಿಕ ನಷ್ಟಗಳನ್ನು ಸರ್ಕಾರಕ್ಕೆ ಸದರಿ ಅಭ್ಯರ್ಥಿಗಳು ಭರಿಸಿಕೊಡಲು ಬದ್ದರಾಗಿರುತ್ತಾರೆ ಹಾಗೂ ಹೊಣೆಗಾರರಾಗಿರುತ್ತಾರೆಂದು ತಿಳಿಯತಕ್ಕದ್ದು.
10) ಅಭ್ಯರ್ಥಿಗಳು ಅವರ ಕರ್ತವ್ಯಗಳನ್ನು ಪಾಲಿಸುತ್ತಿರುವಾಗ ಅಥವಾ ನೆರವೇರಿಸುತ್ತಿರುವಾಗ ಅವರಿಗೆ ಲಭ್ಯವಾಗಬಹುದಾದ ಅಥವಾ ದೊರಕಬಹುದಾದ ಅಧಿಕೃತ ಮಾಹಿತಿಗಳನ್ನು ಗುಪ್ತವಾಗಿಟ್ಟು ಅದರ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ಕಾಪಾಡತಕ್ಕದ್ದು.
11) ಅಭ್ಯರ್ಥಿಗಳು ಸಲ್ಲಿಸಿರುವ ಅಂಕಪಟ್ಟಿಗಳು ಮತ್ತು ಮೀಸಲಾತಿ ಪ್ರಮಾಣ ಪತ್ರಗಳು ಹಾಗೂ ಜಾತಿ ಪ್ರಮಾಣ ಪತ್ರಗಳು ಸಕ್ಷಮ ಪ್ರಾಧಿಕಾರದಿಂದ ಸತ್ಯಾಪನೆಗೆ ಒಳಪಡುತ್ತವೆ.
12) ಅಭ್ಯರ್ಥಿಯು ತಮ್ಮ ಜಾತಿ, ಜನ್ಮ ದಿನಾಂಕ, ವಿದ್ಯಾರ್ಹತೆ ಇತ್ಯಾದಿಯಾಗಿ ಯಾವುದೇ ವಿಚಾರದಲ್ಲಿ ಅಭ್ಯರ್ಥಿಯು ನೀಡಿರುವ ವಿವರಗಳು ಸುಳ್ಳೆಂದಾಗಲೀ ಅಥವಾ ತಪ್ಪೆಂದಾಗಲೀ ತಿಳಿದು ಬಂದಲ್ಲಿ ಅಂತಹ ಅಭ್ಯರ್ಥಿಯ ವಿರುದ್ಧ ಭಾರತೀಯ ದಂಡ ಸಂಹಿತೆಯಲ್ಲಿನ ಸೂಕ್ತ ಕಲಂಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಕೆ.ಸಿ.ಎಸ್. (ಸಿ.ಸಿ.ಎ.) ನಿಯಮಗಳು 1957ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
13) ಅಭ್ಯರ್ಥಿಗಳು ಸಲ್ಲಿಸಿರುವ ಆಯಾಯ ಮೀಸಲಾತಿ ಪ್ರಮಾಣ ಪತ್ರಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯಾಯ ಮೀಸಲಾತಿ category ಯಲ್ಲಿ ನೇಮಕ ಮಾಡಿರುವುದರಿಂದ ಸದರಿ ಅಭ್ಯರ್ಥಿಗಳು ಆಯಾಯ ಮೀಸಲಾತಿ category ಗೆ ಸೇರಿದವರಲ್ಲವೆಂದು ದೃಡಪಟ್ಟಲ್ಲಿ ಅಂತಹ ಅಭ್ಯರ್ಥಿಗಳ ನೇಮಕಾತಿಯನ್ನು ಶಾಶ್ವತವಾಗಿ ಯಾವುದೇ ಸೂಚನೆ ಇಲ್ಲದೇ ರದ್ದುಪಡಿಸಲಾಗುವುದು.
14) ಅಭ್ಯರ್ಥಿಗಳು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಲ್ಲವೆಂದು ಸತ್ಯಾಪನೆಯಿಂದ ದೃಡಪಟ್ಟಲ್ಲಿ ಅಂತಹ ಅಭ್ಯರ್ಥಿಗಳ ನೇಮಕಾತಿಯನ್ನು ಶಾಶ್ವತವಾಗಿ ಯಾವುದೇ ಸೂಚನೆ ಇಲ್ಲದೇ ರದ್ದುಪಡಿಸಲಾಗುವುದು.
15) ಅಭ್ಯರ್ಥಿಯು KGID ಯಲ್ಲಿ ಸರ್ಕಾರಿ ವಿಮೆಯನ್ನು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾದ ಕೂಡಲೇ ಮಾಡತಕ್ಕದ್ದು. 16) ಅಭ್ಯರ್ಥಿಯು ಕೆಳಕಂಡ ದಾಖಲೆಗಳನ್ನು ತಾವು ಕೆಲಸಕ್ಕೆ ಹಾಜರಾಗುವ ಕಛೇರಿಯಲ್ಲಿ ಆ ಕಛೇರಿಯ ಮುಖ್ಯಸ್ಥರ ಮುಂದೆ ತಪ್ಪದೇ ಹಾಜರುಪಡಿಸತಕ್ಕದ್ದು. (1) ಅಭ್ಯರ್ಥಿಯು ತಮ್ಮ passport Size ನ ಎರಡು ಇತ್ತೀಚಿನ ಪೋಟೋ (2) ವಿದ್ಯಾರ್ಹತೆಯ ಬಗ್ಗೆ ಏಳನೇ ತರಗತಿ ಮೂಲ ಅಂಕಪಟ್ಟಿ (Original) (3) ಜನ್ಮ ದಿನಾಂಕದ ಬಗ್ಗೆ ಮೂಲ T.C. (Original) (4) ಸಂಬಂಧಪಟ್ಟ ಸರ್ಕಾರಿ ಜಿಲ್ಲಾ ಸರ್ಜನ್ನಿಂದ ನಿಗದಿತ ನಮೂನೆಯಲ್ಲಿ ಪಡೆದ ವೈದ್ಯಕೀಯ ದೈಹಿಕ ಪ್ರಮಾಣ ಪತ್ರ (Original) (Physical Fitness Certificate)ಭಾಗ - ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ನವೆಂಬರ್ ೧೮, ೨೦೧೦ ೩೩೬೩ (5) ಅಭ್ಯರ್ಥಿಯು ಕಡೆಯದಾಗಿ ಹಾಜರಾಗಿದ್ದ ಶಾಲೆಯ ಮುಖ್ಯೋಪಾಧ್ಯಾಯರು ನೀಡಿರುವ ನಡತೆ ಪ್ರಮಾಣ ಪತ್ರ (Original) 17) ನೇಮಕಾತಿ ಹೊಂದಿರುವವರು ಕೆಳಕಂಡ ಮೀಸಲಾತಿ ದಾಖಲೆಗಳಲ್ಲಿ ಯಾವುದು ಅನ್ವಯವಾಗುವುದೋ ಅದನ್ನು ಅಂದರೆ (i) ಗ್ರಾಮೀಣ ಅಭ್ಯರ್ಥಿಗಳಾಗಿದ್ದಲ್ಲಿ ನಿಗದಿತ ನಮೂನೆ-2 ರಲ್ಲಿ ಗ್ರಾಮೀಣ ಮೂಲ ಮೀಸಲಾತಿ ಪ್ರಮಾಣ ಪತ್ರವನ್ನು, (ii) ಕನ್ನಡ ಮಾಧ್ಯಮ ಅಭ್ಯರ್ಥಿಗಳಾಗಿದ್ದಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಇರುವ ನಿಗದಿತ ನಮೂನೆಯ ಮೂಲ ಪ್ರಮಾಣ ಪತ್ರವನ್ನು.
(iii) ಮಾಜಿ ಸೈನಿಕ ಅಭ್ಯರ್ಥಿಗಳಾಗಿದ್ದಲ್ಲಿ ಸೇನಾ ಬಿಡುಗಡೆ ಮೂಲ ಪ್ರಮಾಣ ಪತ್ರವನ್ನು,
(iv) ಯೋಜನಾ ನಿರಾಶ್ರಿತ ಅಭ್ಯರ್ಥಿಗಳಾಗಿದ್ದಲ್ಲಿ ನಿಗದಿತ ನಮೂನೆಯ ಯೋಜನಾ ನಿರಾಶ್ರಿತ ಮೂಲ ಪ್ರಮಾಣ ಪತ್ರವನ್ನು (v) ಹಾಗೂ ಅಂಗವಿಕಲ ಅಭ್ಯರ್ಥಿಗಳಾಗಿದ್ದಲ್ಲಿ, ಅಂಗವಿಕಲರೆಂಬುದಕ್ಕೆ ನಿಗದಿತ ನಮೂನೆ-ಎ ಮತ್ತು ನಮೂನೆ-ಬಿ ಯಲ್ಲಿ ನೀಡಿರುವ ಸರ್ಕಾರಿ ವೈದ್ಯಕೀಯ ಪ್ರಮಾಣ ಪತ್ರವನ್ನು
ಅಭ್ಯರ್ಥಿಗಳು ಮೇಲ್ಕಂಡವುಗಳಲ್ಲಿ ಯಾವುದು ಅನ್ವಯವಾಗುವುದೋ ಅದನ್ನು ಕೆಲಸಕ್ಕೆ ಹಾಜರಾಗುವ ಸಮಯದಲ್ಲಿ ಆ ಕಛೇರಿಯ ಮುಖ್ಯಸ್ಥರ ಮುಂದೆ ಹಾಜರುಪಡಿಸತಕ್ಕದ್ದು.
ಅಭ್ಯರ್ಥಿಗಳು ಕೆಳಕಂಡ ನಮೂನೆಗಳನ್ನು ಮತ್ತು ಮುಚ್ಚಳಿಕೆಗಳನ್ನು ಕೆಲಸಕ್ಕೆ ಹಾಜರಾಗುವ ಮುನ್ನ ತಪ್ಪದೇ ಬರೆದುಕೊಡತಕ್ಕದ್ದು
18) ಅಭ್ಯರ್ಥಿಯು ಭಾರತದ ಸಂವಿಧಾನಕ್ಕೆ ಬದ್ದರಾಗಿರುವ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಇದಕ್ಕೆ ಲಗತ್ತಿಸಿರುವ ನಮೂನೆಯಲ್ಲಿ ಕೆಲಸಕ್ಕೆ ಹಾಜರಾಗುವ ಕಛೇರಿಯಲ್ಲಿ ಆ ಕಛೇರಿಯ ಮುಖ್ಯಸ್ಥರಿಗೆ ಬರೆದುಕೊಡತಕ್ಕದ್ದು.
19) ಅಭ್ಯರ್ಥಿಯು ಮದುವೆಯಾಗಿದ್ದಲ್ಲಿ ಒಬ್ಬರೇ ಪತಿ ಅಥವಾ ಪತ್ನಿ ಹೊಂದಿರುವ ಬಗ್ಗೆ ಕೆ.ಸಿ.ಎಸ್. (ನಡತೆ) ನಿಯಮಗಳು 1966 ರಲ್ಲಿನ ನಿಯಮ 28ರ ರೀತ್ಯ ಇದಕ್ಕೆ ಲಗತ್ತಿಸಿರುವ ನಮೂನೆಯಲ್ಲಿರುವ ಘೋಷಣಾ ಪತ್ರವನ್ನು ಕೆಲಸಕ್ಕೆ ಹಾಜರಾಗುವ ಕಛೇರಿಯಲ್ಲಿ ಆ ಕಛೇರಿಯ ಮುಖ್ಯಸ್ಥರಿಗೆ ಬರೆದುಕೊಡತಕ್ಕದ್ದು.
20) ಒಂದು ವೇಳೆ ಅಭ್ಯರ್ಥಿಯು ಸಲ್ಲಿಸಿರುವ ಅಂಕಪಟ್ಟಿಗಳು ಮತ್ತು ಮೀಸಲಾತಿ ಪ್ರಮಾಣ ಪತ್ರಗಳು ಹಾಗೂ ಜಾತಿ ಪ್ರಮಾಣ ಪತ್ರಗಳು ಸುಳ್ಳು ಅಥವಾ ನಕಲಿ ಎಂದು ದೃಡಪಟ್ಟಲ್ಲಿ ಅಂತಹ ಅಭ್ಯರ್ಥಿಗಳ ಆಯ್ಕೆಯನ್ನು ಮತ್ತು ನೇಮಕಾತಿಯನ್ನು ಶಾಶ್ವತವಾಗಿ ರದ್ದುಪಡಿಸಲಾಗುವುದು ಹಾಗೂ ಅಭ್ಯರ್ಥಿಯ ವಿರುದ್ಧ ಭಾರತೀಯ ದಂಡ ಸಂಹಿತೆಯಲ್ಲಿನ ಸೂಕ್ತ ಕಲಂಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ KCS (CCA) ನಿಯಮಗಳು 1957ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಬದ್ದನಾಗಿರುತ್ತೇನೆ ಎಂಬ ಬಗ್ಗೆ ಅಭ್ಯರ್ಥಿಯು 20/- ರೂ.ಗಳ ಛಾಪಾ ಕಾಗದದಲ್ಲಿ ಇದಕ್ಕೆ ಲಗತ್ತಿಸಿರುವ ಮುಚ್ಛಳಿಕೆ ನಮೂನೆ-1 ಅನ್ನು ಕೆಲಸಕ್ಕೆ ಹಾಜರಾಗುವ ಮುನ್ನ ಈ ಕಛೇರಿಗೆ ಬರೆದುಕೊಡತಕ್ಕದ್ದು.
21) ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಬೇರೆ ಇನ್ಯಾವುದೇ ಅಭ್ಯರ್ಥಿಯು ಅವರ ಆಯ್ಕೆಯನ್ನು ದಾಖಲೆ ಸಹಿತ establish ಮಾಡಿದಲ್ಲಿ ಅಥವಾ ನನ್ನ ನೇಮಕಾತಿಯು ಅಸಿಂಧುವೆಂದು ದಾಖಲೆಗಳ ಸಹಿತ ಸಾಬೀತುಪಡಿಸಿದಲ್ಲಿ ನನ್ನ ನೇಮಕಾತಿಯನ್ನು ಯಾವುದೇ ಸೂಚನೆ ಇಲ್ಲದೇ ಶಾಶ್ವತವಾಗಿ ರದ್ದುಗೊಳಿಸಿ ನನ್ನ ಬದಲಿಗೆ ಬೇರೊಬ್ಬರನ್ನು ಆಯ್ಕೆ ಮಾಡಬಹುದು ಎಂಬ ಬಗ್ಗೆ ಅಭ್ಯರ್ಥಿಯು 20/- ರೂ. ಛಾಪಾ ಕಾಗದದಲ್ಲಿ ಇದಕ್ಕೆ ಲಗತ್ತಿಸಿರುವ ಮುಚ್ಚಳಿಕೆ ನಮೂನೆ-2 ಅನ್ನು ಕೆಲಸಕ್ಕೆ ಹಾಜರಾಗುವ ಮುನ್ನ ಈ ಕಛೇರಿಗೆ ಬರೆದುಕೊಡತಕ್ಕದ್ದು.
22) ಒಂದು ವೇಳೆ ನಾನು ಈ ಇಲಾಖೆಯಲ್ಲಿ ಜವಾನರೆಂದು ನೇಮಕಾತಿ ಹೊಂದುವ ಮೊದಲು ಅಥವಾ ನಾನು ಜವಾನರೆಂದು ನೇಮಕಾತಿ ಹೊಂದಿ ಈ ಇಲಾಖೆಯಲ್ಲಿ ಜವಾನರಾಗಿ ಸರ್ಕಾರಿ ಕೆಲಸಕ್ಕೆ ಹಾಜರಾದ ದಿನಾಂಕದ ನಂತರ ನಾನು ಸರ್ಕಾರಿ ಸೇವೆಯಿಂದ ಶಾಶ್ವತವಾಗಿ ನಿರ್ಗಮಿಸುವ ದಿನಾಂಕದವರೆಗಿನ ಅವಧಿಯಲ್ಲಿ ಅಂದರೆ ನಾನು ಈ ಇಲಾಖೆಯಲ್ಲಿ ಸರ್ಕಾರಿ ನೌಕರನಾಗಿರುವ ಅವಧಿಯಲ್ಲಿ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಬೇರೆ ಇನ್ಯಾವುದೇ ಅಭ್ಯರ್ಥಿಯಾಗಲೀ ಅಥವಾ ಬೇರೆ ಇನ್ಯಾವುದೇ ಸಾರ್ವಜನಿಕರಾಗಲೀ ದಾಖಲೆಗಳ ಸಹಿತ ಸಕಾರಣಗಳೊಂದಿಗೆ ನಾನು ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿಲ್ಲವೆಂದಾಗಲೀ ಅಥವಾ ನಾನು ಸಲ್ಲಿಸಿರುವ ಏಳನೇ ತರಗತಿ ಅಂಕಪಟ್ಟಿಯು ನಕಲಿ (ಖೊಟ್ಟಿ) ಎಂದಾಗಲೀ ದಾಖಲೆಗಳ ಸಹಿತ ಸಾಬೀತುಪಡಿಸಿದಲ್ಲಿ ನನ್ನ ಆಯ್ಕೆಯನ್ನು ಮತ್ತು ಈ ನನ್ನ ನೇಮಕಾತಿಯನ್ನು ಯಾವುದೇ ಕಾರಣ ನೀಡದೇ ಯಾವುದೇ ಘಳಿಗೆಯಲ್ಲಾದರೂ ಶಾಶ್ವತವಾಗಿ ರದ್ದುಪಡಿಸುವುದಕ್ಕೂ ಹಾಗೂ ಯಾವುದೇ ಕಾರಣ ನೀಡದೇ ಅಥವಾ ಯಾವುದೇ ನೋಟೀಸ್ ನೀಡದೇ ನನ್ನನ್ನು ಸರ್ಕಾರಿ ಸೇವೆಯಿಂದ ಶಾಶ್ವತವಾಗಿ ವಜಾ ಮಾಡುವುದಕ್ಕೂ ನಾನು ಒಪ್ಪಿರುತ್ತೇನೆ ಎಂಬ ಬಗ್ಗೆ ಅಭ್ಯರ್ಥಿಯು 20/- ರೂ. ಛಾಪಾ ಕಾಗದದಲ್ಲಿ ಇದಕ್ಕೆ ಲಗತ್ತಿಸಿರುವ ಮುಚ್ಚಳಿಕೆ ನಮೂನೆ-3 ಅನ್ನು ಕೆಲಸಕ್ಕೆ ಹಾಜರಾಗುವ ಮುನ್ನ ಈ ಕಛೇರಿಗೆ ಬರೆದುಕೊಡತಕ್ಕದ್ದು.
23) ಮಹಿಳಾ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ಎಲ್ಲಾ ಮಹಿಳಾ ಅಭ್ಯರ್ಥಿಗಳು ಗೌರವಾನ್ವಿತ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 232/99 (ಶ್ರೀ ಬಿ.ಎಲ್. ನಾರಾಯಣ –VS - ಕರ್ನಾಟಕ ರಾಜ್ಯ ಮತ್ತು ಇತರರು) ಇದರಲ್ಲಿ ಆಗುವ ಅಂತಿಮ ತೀರ್ಪಿಗೆ ಬದ್ದರಾಗಿರತಕ್ಕದ್ದು ಹಾಗೂ ಮುಂಬರುವ ಸದರಿ ತೀರ್ಪಿನ ಪ್ರಕಾರ ಮಹಿಳಾ ಅಭ್ಯರ್ಥಿಗಳು ಜವಾನರ ಹುದ್ದೆಯ ಮೇಲೆ ಯಾವುದೇ ಹಕ್ಕನ್ನು ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ಹಕ್ಕನ್ನು ಸಾಧಿಸತಕ್ಕದ್ದಲ್ಲವೆಂದು ತಿಳಿಯತಕ್ಕದ್ದು ಹಾಗೂ ಸದರಿ ರಿಟ್ ಅರ್ಜಿ (ಸಿವಿಲ್) ಸಂಖ್ಯೆ: 232:99ರಲ್ಲಿ ಆಗುವ ಅಂತಿಮ ತೀರ್ಪಿಗೆ ಬದ್ದಳಾಗಿರುತ್ತೇನೆ ಎಂಬ ಬಗ್ಗೆ 20/- ರೂ. ಗಳ ಛಾಪಾ ಕಾಗದದಲ್ಲಿ ಇದಕ್ಕೆ ಲಗತ್ತಿಸಿರುವ ಮುಚ್ಚಳಿಕೆ ನಮೂನೆ-4 ಅನ್ನು ಕೆಲಸಕ್ಕೆ ಹಾಜರಾಗುವ ಮುನ್ನ ಈ ಕಛೇರಿಗೆ ಬರೆದುಕೊಡತಕ್ಕದ್ದು.
ಕರ್ನಾಟಕ ರಾಜ್ಯಪತ್ರ, ಗುರುವಾರ, ನವೆಂಬರ್ ೧೮, ೨೦೧೦ ಭಾಗ - ೫ ೩೩೬೪24) ಸರ್ಕಾರದವರು ಈ ಹಿಂದೆ ಜಾರಿಯಲ್ಲಿದ್ದ ನಿವೃತ್ತಿ ಪಿಂಚಣಿ ಸೌಲಭ್ಯ ಯೋಜನೆಗೆ ಬದಲಾಗಿ ದಿನಾಂಕ:01.04.2006 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ: RD SPL-04 PET 2005, ದಿನಾಂಕ:31.03.2006ರ ಆದೇಶದಲ್ಲಿ ಹೊಸದಾಗಿ New defined Contributory Pension Scheme ಎಂಬ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುತ್ತಾರೆ. ಈ ಹೊಸ ಪಿಂಚಣಿ ಯೋಜನೆಯು ದಿನಾಂಕ:01.04.2006 ರಿಂದ ಅಥವಾ ತದನಂತರ ನೇಮಕಾತಿ ಹೊಂದಿದ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ ಎಂದು ಆದೇಶ ಮಾಡಿರುತ್ತಾರೆ. ಆದ್ದರಿಂದ ಈ ಜಿಲ್ಲೆಯಲ್ಲಿ ನೇಮಕ ಹೊಂದಿದ ಸದರಿ ನೌಕರರು ದಿನಾಂಕ:31.03.2006ರ ಸದರಿ ಸರ್ಕಾರದ ಆದೇಶದನ್ವಯ ಹೊಸ ಪಿಂಚಣಿ ಯೋಜನೆಗೆ ಒಳಪಡುತ್ತಾರೆಂದು ಈ ಮೂಲಕ ಆದೇಶಿಸಿದೆ ಹಾಗೂ ದಿನಾಂಕ:31.03.2006ರ ಸದರಿ ಸರ್ಕಾರದ ಆದೇಶದಲ್ಲಿನ ನಿರ್ದೇಶನಕ್ಕೆ ಸದರಿ ನೌಕರರು ಬದ್ಧರಾಗಿರತಕ್ಕದ್ದು.
ನೇಮಕಾತಿ ಪ್ರಾಧಿಕಾರಿ ಹಾಗೂ ಪಿ.ಆರ್.738
ಜಿಲ್ಲಾ ನೋಂದಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ.
ಶಿಕ್ಷಣ ಇಲಾಖೆ
ಅಧಿಸೂಚನೆ ಸಂಖ್ಯೆ: ಇಡಿ 159 ಡಿಟಿಇ 2010, ಬೆಂಗಳೂರು, ದಿನಾಂಕ:13ನೇ ಅಕ್ಟೋಬರ್, 2010
ಕರ್ನಾಟಕ ಲೋಕಸೇವಾ ಆಯೋಗದಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾಗಿರುವ ಈ ಕೆಳಕಂಡ ಅಭ್ಯರ್ಥಿಗಳು ದಿನಾಂಕ:27.09.2010ರಂದು ನಡೆದ ಕೌನ್ಸಿಲಿಂಗ್ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡಿರುವಂತೆ ರೂ.12,000-18,300/-ರ ಎಐಸಿಟಿಇ ವೇತನ ಶ್ರೇಣಿಯಲ್ಲಿ
| ಕ್ರಮ ಸ ಂಖ್ಯೆ | ಅಭ್ಯರ್ಥಿಗಳ ಹೆಸರು ಮತ್ತು ವಿಳಾಸ ಶಿ ೕ:ಶ್ರೀಮತಿ ್ರ | ನೇಮಿಸಾದ ಸ್ಥಳ |
| 1 | 2 | 3 |
| 1. | ಇಮ್ರಾನ್ಖಾನ್, ನಂ.4155/ಎ, 1ನೇ ಮಹಡಿ, ಟೆಲಿಫೋನ್ ಎಕ್ಸ್ಛೇಂಜ್ ಕ್ರಾಸ್, ಟಿ.ಬಿ. ಎಕ್ಸ್ಟೆಂಎನ್, ರಾಮನಗರ\571511. | ಸರ್ಕಾರಿ ಇಂಜಿನಿಯರಿಂಗ್ ಕಾೇಜು, ರಾಮನಗರ. |
| 2. | ರೇಖಾ ಆರ್.ಎಸ್. C/o ಲಿಂಗರಾಜು ಆರ್. ನಂ.650, 12ನೇ ಕ್ರಾಸ್, 3ನೇ ಹಂತ, ಗೋಕುಲಂ, ಮೈಸೂರು\570002. | ಸರ್ಕಾರಿ ಇಂಜಿನಿಯರಿಂಗ್ ಕಾೇಜು, ಹೂವಿನಹಡಗಲಿ. |
ಸದರಿ ನೇಮಕಾತಿಯು ಈ ಕೆಳಗಿನ ಷರತ್ತುಗಳಿಗೊಳಪಟ್ಟಿರುತ್ತವೆ.
1) ಇವರನ್ನು ಎರಡು ವರ್ಷಗಳ ಪರಿವೀಕ್ಷಣಾ ಅವಧಿಗೆ ಒಳಪಡಿಸಲಾಗಿರುತ್ತದೆ. 2) ಈ ನೇಮಕಾತಿ ತಾತ್ಕಾಲಿಕವಾಗಿದ್ದು ಆಗಿಂದಾಗ್ಗೆ ವಿಧಿಸುವ ಸೇವಾ ಷರತ್ತುಗಳಿಗೆ ಒಳಪಟ್ಟಿರುತ್ತದೆ. 3) ಜನ್ಮ ದಿನಾಂಕ, ವಿದ್ಯಾರ್ಹತೆ (ಅಂಕಪಟ್ಟಿ) ಹಾಗೂ ನಡತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳನ್ನು ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸತಕ್ಕದ್ದು.
4) ಕರ್ನಾಟಕ ಸೇವಾ (ಸೇವಾ ಮತ್ತು ಕನ್ನಡ ಭಾಷೆ ಪರೀಕ್ಷೆಗಳು) ನಿಯಮಗಳು (1974)ರ ಅಡಿ ನಿಗದಿಪಡಿಸಿರುವ ಕನ್ನಡ ಭಾಷಾ ಪರೀಕ್ಷೆ ಹಾಗೂ ಇತರೆ ಪರೀಕ್ಷೆಗಳಲ್ಲಿ ಪರಿವೀಕ್ಷಣಾ ಅವಧಿಯಲ್ಲಿ ಉತ್ತೀರ್ಣರಾಗತಕ್ಕದ್ದು.
5) ಇವರ ಸೇವಾ ಜೇಷ್ಠತೆಯು ಪ್ರಸ್ತುತ ಕರ್ನಾಟಕ ಲೋಕಸೇವಾ ಆಯೋಗದ ಆಯಾಯ ವಿಷಯದಲ್ಲಿ ನಿರ್ಧರಿಸಿದಂತೆ ಇರತಕ್ಕದ್ದು.
ನಂತರ ಕರ್ನಾಟಕ ಲೋಕಸೇವಾ ಆಯೋಗವು ಕ್ರೋಡೀಕೃತ ಜೇಷ್ಠತಾ ಪಟ್ಟಿಯಲ್ಲಿ ನಿಗದಿಪಡಿಸಿದಂತೆ ಹಾಗೂ ತದನಂತರ ಹಾಗೂ ಸರ್ಕಾರ ಹೊರಡಿಸುವ ಅಧಿಸೂಚನೆಯಲ್ಲಿ ಇರತಕ್ಕದ್ದು.
6) ಇವರ ನೇಮಕಾತಿಯು ಪ್ರಸ್ತಾಪಿತ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ದಾಖಲಾಗಿರುವ ಅರ್ಜಿ ಸಂಖ್ಯೆ:1927/09, 1929-1959/2009, 1381-83/2010, 3108-10, 4007/10 ಇತ್ಯಾದಿಗಳಲ್ಲಿನ ಅಂತಿಮ ತೀರ್ಮಾನಕ್ಕೆ ಬದ್ಧವಾಗಿರುತ್ತದೆ.
7) ನೇಮಿಸಲಾದ ಸ್ಥಳಗಳಿಗೆ ನೇಮಕಾತಿ ಆದೇಶವನ್ನು ಸ್ವೀಕರಿಸಿದ 15 ದಿನಗಳೊಳಗೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. 8) ಗುಣ ನಡತೆ ಪ್ರಮಾಣ ಪತ್ರ ಬಂದಿಲ್ಲದಿರುವ ಪ್ರಕರಣಗಳಲ್ಲಿ ಗುಣ ನಡತೆ ಪ್ರಮಾಣ ಪತ್ರ ಬಂದಾಗ ಅದರಲ್ಲಿ ನ್ಯೂನತೆ ಕಂಡುಬಂದಲ್ಲಿ ಅಂತಹ ನೇಮಕಾತಿಗಳ ಆದೇಶವನ್ನು ರದ್ದುಪಡಿಸುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ.
9) ಪಿಹೆಚ್.ಡಿ. ಪಡೆಯದ ಅಭ್ಯರ್ಥಿಗಳು ಸೇವೆಗೆ ಸೇರಿದ ಏಳು ವರ್ಷಗಳ ಅವಧಿಯೊಳಗೆ ತಾಂತ್ರಿಕ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪಿಹೆಚ್ಡಿ ಪದವಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಬಿ.ಎನ್. ಜಗದೀಶ್
ಪಿ.ಆರ್.739
ಸರ್ಕಾರದ ಅಧೀನ ಕಾರ್ಯದರ್ಶಿ,
ಶಿಕ್ಷಣ ಇಲಾಖೆ (ತಾಂತ್ರಿಕ ಶಿಕ್ಷಣ).