Servants of Knowledge
Karnataka Gazette · Government of Karnataka

Karnataka Gazette, Part Part-5, 13 June 2019

Published 13 June 2019

Part
Part-5
Identifier
in.gazette.karnataka_new.2019-06-13.Part-5
Languages
English, Kannada
Published at
Original source ↗

click here for IIIF manifest

ಸಂಪುಟ ೧೫೪

Volume 154

ಬೆಂಗಳೂರು, ಗುರುವಾರ, ಜೂನ್ ೧೩, ೨೦೧೯ (ಜ್ಯೇಷ್ಠ ೨೩, ಶಕ ವರ್ಷ ೧೯೪೧)

Bengaluru, Thursday, June 13, 2019 (Jyeishta 23, Shaka Varsha 1941)

ಸಂಚಿಕೆ ೨೪

Issue 24

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಬಸವ ಬವನ, ಹೈ ಗ್ರೌಂಡ್ಸ್, ಬೆಂಗಳೂರು-560001

ಅಧಿಸೂಚನೆ

ಸಂಖ್ಯೆ: ಕರಾಆ:ಆಡಳಿತ:10:2019, ದಿನಾಂಕ: 04.06.2019

ವಿಷಯ:

ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರು, ರಾಜ್ಯ ಗ್ರಾಹಕರ ಆಯೋಗದ ನ್ಯಾಯಿಕ ಸದಸ್ಯರು, ಮಹಿಳಾ ಸದಸ್ಯರು, ರಾಜ್ಯ ಆಯೋಗದ ಹೆಚ್ಚುವರಿ ಪೀಠದ ನ್ಯಾಯಿಕ ಸದಸ್ಯರು ಮತ್ತು ಮಹಿಳಾ ಸದಸ್ಯರು ಹಾಗೂ ವಿವಿಧ ಜಿಲ್ಲಾ ವೇದಿಕೆಗಳ ಪೂರ್ಣಕಾಲಿಕ/ಅರೆಕಾಲಿಕ ಸದಸ್ಯರು ಮತ್ತು ಪೂರ್ಣಕಾಲಿಕ/ಅರೆಕಾಲಿಕ ಮಹಿಳಾ ಸದಸ್ಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ.

1. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರ ಹುದ್ದೆ

ಕರ್ನಾಟಕ ರಾಜ್ಯದಲ್ಲಿ ಈ ಕೆಳಕಂಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳಲ್ಲಿ ಖಾಲಿ ಇರುವ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮುಂದೆ ನಮೂದಿಸಿರುವ ದಿನಾಂಕಕ್ಕೆ ಖಾಲಿಯಾಗಲಿರುವ ಅಧ್ಯಕ್ಷರ ಹುದ್ದೆಗೆ ಸೂಕ್ತ ಅರ್ಹತೆ ಹೊಂದಿರುವವರನ್ನು ಆಯ್ಕೆ ಮಾಡುವ ಸಲುವಾಗಿ ನಿಗಧಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವರ ಈ ಕೆಳಗಿನಂತಿದೆ:-

ಕ್ರಮ ಸ ಂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಹೆಸರು ಖಾಲಿ ಇರುವ ಹಾಗೂ ಖಾಲಿಯಾಗುವ ಅಧ್ಯಕ್ಷರ ಹುದ್ದೆಗಳು
1 ಬ ಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ೆ 01
2 ಬ ೆ ಂಗಳೂರು ನಗರ 3ನೇ ಅಪರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪ ರಿಹಾರ ವೇದಿಕೆ 01
3 ಬಿಜಾಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
4 ಚಾಮರಾಜನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
5 ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
6 ವ ುೖಸೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ೆ 01
7 ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
8 ಬೀದರ್ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01 (ದಿನಾಂಕ 13.06.2019ರ ಅಪರಾಹ್ನದಿಂದ ಖಾಲಿಯಾಗುವ ಹುದ್ದೆಗೆ)
9 ಬ ೆ ಂಗಳೂರು ನಗರ 2ನೇ ಅಪರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪ ರಿಹಾರ ವೇದಿಕೆ 01 (ದಿನಾಂಕ 07.08.2019ರ ಅಪರಾಹ್ನದಿಂದ ಖಾಲಿಯಾಗುವ ಹುದ್ದೆಗೆ)
ಒಟ್ಟು 09 ಹುದ್ದೆಗಳು

(೧೦೬೫)೧೦೬೬ ಕರ್ನಾಟಕ ರಾಜ್ಯಪತ್ರ, ಗುರುವಾರ ಜೂನ್ ೧೩, ೨೦೧೯ ಭಾಗ ೫

ಅ. ವಿದ್ಯಾರ್ಹತೆ ಮತ್ತು ಅನುಭವ

(i) ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 10(1)(a) ರನ್ವಯ, ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸುತ್ತಿರುವ ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸಿದವರು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆ ಹೊಂದಲು ಅರ್ಹರಿರುವವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

(ii) ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸುತ್ತಿರುವ ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದವರಿಗೆ ಆಯ್ಕೆಯಲ್ಲಿ ಆದ್ಯತೆಯನ್ನು ನೀಡಲಾಗುವುದು.

ಆ. ಅಧ್ಯಕ್ಷರ ಸೇವಾವಧಿ

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರ ಸೇವಾವಧಿಯು ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 10(2)ರನ್ವಯ 5 ವರ್ಷ ಅಥವಾ 65 ವರ್ಷ ವಯಸ್ಸು ಪೂರ್ಣವಾಗುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

ಇ. ಅಧ್ಯಕ್ಷರ ವೇತನ ಮತ್ತು ಭತ್ಯೆಗಳು

ಕರ್ನಾಟಕ ಗ್ರಾಹಕ ಸಂರಕ್ಷಣಾ ನಿಯಮಗಳು 1988ರ ನಿಯಮ 3(1) ರನ್ವಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರ ಹುದ್ದೆಗೆ ಆಯ್ಕೆಗೊಂಡವರು ಜಿಲ್ಲಾ ನ್ಯಾಯಾಧೀಶರ ವೃಂದದ ವೇತನ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

ಈ. ಆಯ್ಕೆ ವಿಧಾನ

ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 10(1A) ರಡಿಯಲ್ಲಿನ ಆಯ್ಕೆ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

2. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ರಾಜ್ಯ ಆಯೋಗದ ಹೆಚ್ಚುವರಿ ಪೀಠದ ನ್ಯಾಯಾಂಗ ಸದಸ್ಯರು/ಮಹಿಳಾ ಸದಸ್ಯರ

ಕ್ರಮ ಸ ಂ ರಾಜ್ಯ ಆಯೋಗ/ಹೆಚ್ಚುವರಿ ಪೀಠ ಖಾಲಿ ಇರುವ/ಖಾಲಿಯಾಗುವ ಹುದ್ದೆಗಳು
ನ್ಯಾಯಾಂಗ ಸದಸ್ಯರು ವ ುಹಿಳಾ ಸದಸ್ಯರು
1 ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 01 (ದಿ.30-07-2019ರಿಂದ ಖಾಲಿಯಾಗುವ ಹುದ್ದೆ) 01
2 ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಹೆಚ್ಚುವರಿ ಪೀಠ 01 (ಒಂದು ವರ್ಷದ ಕಾಲಿಕ ಹುದ್ದೆ) 01 (ಒಂದು ವರ್ಷದ ಕಾಲಿಕ ಹುದ್ದೆ)
ಒಟ್ಟು 02 02

(i) ರಾಜ್ಯ ಆಯೋಗದ ನ್ಯಾಯಾಂಗ ಸದಸ್ಯರು:

ಅ. ವಿದ್ಯಾರ್ಹತೆ ಹಾಗೂ ಅನುಭವ

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನ್ಯಾಯಾಂಗ ವೃಂದದ ಸದಸ್ಯರ ಹುದ್ದೆಗೆ ಅರ್ಹರಾಗಿರುವಂತಹ ಅಭ್ಯರ್ಥಿಯು ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 16(1)(ಬಿ) ರ ಮೊದಲನೇ ಪರಂತುಕ ಹಾಗೂ ಅದರೊಂದಿಗೆ ಓದಿಕೊಳ್ಳುವ ವಿವರಣೆಯ ಅನ್ವಯ ಕನಿಷ್ಠ ಹತ್ತು ವರ್ಷಗಳು ಜಿಲ್ಲಾ ಮಟ್ಟದ ನ್ಯಾಯಾಂಗ ಅಥವಾ ಟ್ರಿಬ್ಯೂನಲ್‌ಗೆ ಸರಿಸಮಾನವಾದ ನ್ಯಾಯಾಲಯದಲ್ಲಿ ಪೀಠಾಧಿಕಾರಿಗಳಾಗಿ ಸೇವೆಸಲ್ಲಿಸಿದವರು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆ. ಸೇವಾವಧಿ

(i) ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನ್ಯಾಯಾಂಗ ವೃಂದದ ಪೂರ್ಣಕಾಲಿಕ ಸದಸ್ಯರ ಸೇವಾವಧಿಯು 5 ವರ್ಷ ಅಥವಾ 67 ವರ್ಷ ವಯಸ್ಸು ಪೂರ್ಣವಾಗುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

(ii) ಹೆಚ್ಚುವರಿ ಪೀಠದ ನ್ಯಾಯಿಕ ಸದಸ್ಯರ ಹುದ್ದೆಯ ಅವಧಿಯು ಒಂದು ವರ್ಷಕ್ಕೆ ನಿಗಧಿ ಮಾಡಿದ್ದು, ಅವಧಿ ವಿಸ್ತಾರಣೆ ಸರ್ಕಾರದ ಆದೇಶಕ್ಕೆ ಒಳಪಟ್ಟಿರುತ್ತದೆ.

ಇ. ವೇತನ ಮತ್ತು ಭತ್ಯೆಗಳು

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನ್ಯಾಯಾಂಗ ಸದಸ್ಯರಾಗಿ ಆಯ್ಕೆಯಾದವರು ಪ್ರತಿ ತಿಂಗಳಿಗೆ ರೂ.50,000/-ಗಳ ಗೌರವಧನ ಪಡೆಯಲು ಅರ್ಹರಿರುತ್ತಾರೆ ಹಾಗೂ ಸರ್ಕಾರದಿಂದ ಕಾಲಕಾಲಕ್ಕೆ ಪರಿಷ್ಕರಿಸಿ ಹೊರಡಿಸುವ ಆದೇಶಗಳು ಅನ್ವಯವಾಗುತ್ತವೆ.

ಈ. ಆಯ್ಕೆ ವಿಧಾನ

ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 16(1A) ರಡಿಯಲ್ಲಿನ ಆಯ್ಕೆ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

(ii) ರಾಜ್ಯ ಆಯೋಗದ ಮಹಿಳಾ ಸದಸ್ಯರು:

ಅ. ವಿದ್ಯಾರ್ಹತೆ ಮತ್ತು ಅನುಭವ

ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 16(1)(ಬಿ) ರನ್ವಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮಹಿಳಾ ಸದಸ್ಯರ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಅರ್ಹತೆ ಹೊಂದಿರಬೇಕು.

(i) ಅಭ್ಯರ್ಥಿಗೆ ಕನಿಷ್ಠ 35 ವರ್ಷ ವಯಸ್ಸಾಗಿರತಕ್ಕದ್ದು. (ii) ಅಭ್ಯರ್ಥಿಯು ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು. (iii) ಅಭ್ಯರ್ಥಿಯು ನ್ಯಾಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಹೊಂದಿರುವುದರ ಜೊತೆಗೆ ಕಾನೂನು ಹಣಕಾಸು, ವಾಣಿಜ್ಯ, ಲೆಕ್ಕ ಕೈಗಾರಿಕೆ, ಸಾರ್ವಜನಿಕ ವ್ಯವಹಾರಗಳ ಮತ್ತು ಸಾರ್ವಜನಿಕ ಆಡಳಿತ ಈ ಕ್ಷೇತ್ರಗಳಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ ಜೂನ್ ೧೩, ೨೦೧೯ ೧೦೬೭

ಆ. ಸೇವಾವಧಿ

(i) ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರ ಸೇವಾವಧಿಯು 5 ವರ್ಷ ಅಥವಾ 67 ವರ್ಷ ವಯಸ್ಸು ಪೂರ್ಣವಾಗುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

(ii) ಹೆಚ್ಚುವರಿ ಪೀಠದ ಮಹಿಳಾ ಸದಸ್ಯರು ಹುದ್ದೆಯ ಅವಧಿಯು ಒಂದು ವರ್ಷಕ್ಕೆ ನಿಗದಿ ಮಾಡಿದ್ದು, ಅವಧಿ ವಿಸ್ತಾರಣೆ ಸರ್ಕಾರದ ಆದೇಶಕ್ಕೆ ಒಳಪಟ್ಟಿರುತ್ತದೆ.

ಇ. ವೇತನ ಮತ್ತು ಭತ್ಯೆಗಳು

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾಗಿ ಆಯ್ಕೆಯಾದವರು ಪ್ರತಿ ತಿಂಗಳಿಗೆ ರೂ.50,000/-ಗಳ ಗೌರವಧನ ಪಡೆಯಲು ಅರ್ಹರಿರುತ್ತಾರೆ ಹಾಗೂ ಸರ್ಕಾರದಿಂದ ಕಾಲಕಾಲಕ್ಕೆ ಪರಿಷ್ಕರಿಸಿ ಹೊರಡಿಸುವ ಆದೇಶಗಳು ಅನ್ವಯವಾಗುತ್ತವೆ.

ಈ. ಆಯ್ಕೆ ವಿಧಾನ

ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 16(1A) ರಡಿಯಲ್ಲಿನ ಆಯ್ಕೆ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು

ಕ್ರಮ ಸಂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಹೆಸರು ಖಾಲಿ ಇರುವ ಸದಸ್ಯರ ಹುದ್ದೆಗಳು
ಪ ೂರ್ಣಕಾಲಿಕ ಸದಸ್ಯರ ಹುದ್ದೆಗಳು
1 ಬ ಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ 1ನೇ ಹೆಚ್ಚುವರಿ ಜಿಲ್ಲಾ ೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
2 ಬ ಂಗಳೂರು ನಗರ 3ನೇ ಅಪರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ೆ 01
3 ಬ ಳ ೆ ಗಾವಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
4 ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
5 ದ ಕಿ ಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ್ಷ 01
6 ವ ುಂಡ್ಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
7 ತ ುಮಕೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
ಅರೆಕಾಲಿಕ ಸದಸ್ಯರ ಹುದ್ದೆಗಳು
1 ದ ಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
2 ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
3 ಕೋಲಾರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
4 ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
5 ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
6 ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
7 ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
8 ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
9 ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
ಪ ೂರ್ಣಕಾಲಿಕ ಮಹಿಳಾ ಸದಸ್ಯರ ಹುದ್ದೆಗಳು
1 ಬ ಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ೆ 01
2 ಬ ಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ 1ನೇ ಹೆಚ್ಚುವರಿ ಜಿಲ್ಲಾ ೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
3 ವಿಜಯಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
4 ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
5 ವ ುೖಸೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ೆ 01
6 ತ ುಮಕೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
ಅರೆಕಾಲಿಕ ಮಹಿಳಾ ಸದಸ್ಯರ ಹುದ್ದೆಗಳು
1 ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
2 ಬೀದರ್ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01

R.N.I. No. KARBIL/2001/47147 POSTAL REGN. No. RNP/KA/BGS/2202/2017-19

Licensed to post without prepayment WPP No. 297

೧೦೬೮ ಕರ್ನಾಟಕ ರಾಜ್ಯಪತ್ರ, ಗುರುವಾರ ಜೂನ್ ೧೩, ೨೦೧೯ ಭಾಗ ೫
ಕ್ರಮ ಸಂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಹೆಸರು ಖಾಲಿ ಇರುವ ಸದಸ್ಯರ ಹುದ್ದೆಗಳು
3 ದ ಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
4 ಕಲಬುರಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
5 ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
6 ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
7 ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
8 ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01
ಒಟ್ಟು 30 ಹುದ್ದೆಗಳು

ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 10(1)(ಬಿ) ರನ್ವಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರ ಮತ್ತು ಮಹಿಳಾ ಸದಸ್ಯರ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಅರ್ಹತೆ ಹೊಂದಿರಬೇಕು.

(i) ಅಭ್ಯರ್ಥಿಗೆ ಕನಿಷ್ಠ 35 ವರ್ಷ ವಯಸ್ಸಾಗಿರತಕ್ಕದ್ದು.

(ii) ಅಭ್ಯರ್ಥಿಯು ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು.

(iii) ಅಭ್ಯರ್ಥಿಯು ನ್ಯಾಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಹೊಂದಿರುವುದರ ಜೊತೆಗೆ ಕಾನೂನು ಹಣಕಾಸು, ವಾಣಿಜ್ಯ, ಲೆಕ್ಕ ಕೈಗಾರಿಕೆ, ಸಾರ್ವಜನಿಕ ವ್ಯವಹಾರಗಳ ಮತ್ತು ಸಾರ್ವಜನಿಕ ಆಡಳಿತ ಈ ಕ್ಷೇತ್ರಗಳಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು.

ಆ. ಸೇವಾವಧಿ

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಪೂರ್ಣಕಾಲಿಕ/ಅರೆಕಾಲಿಕ ಸದಸ್ಯರು ಮತ್ತು ಮಹಿಳಾ ಸದಸ್ಯರ ಸೇವಾವಧಿಯು ಗ್ರಾಹಕರ ಸಂರಕ್ಷಣಾ ಕಾಯ್ದೆ 1986ರ ಕಲಂ 10(2)ರನ್ವಯ 5 ವರ್ಷ ಅಥವಾ 65 ವರ್ಷ ವಯಸ್ಸು ಪೂರ್ಣವಾಗುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

ಇ. ವೇತನ ಮತ್ತು ಭತ್ಯೆಗಳು

(i) ಸರ್ಕಾರದ ಆದೇಶ ಸಂ: ಆನಾಸ 65 ಸಲಫ 2012 ದಿನಾಂಕ: 21.02.2014 ರನ್ವಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಪೂರ್ಣಕಾಲಿಕ ಸದಸ್ಯರು/ಮಹಿಳಾ ಸದಸ್ಯರಾಗಿ ಆಯ್ಕೆಗೊಂಡವರು ಪ್ರತಿ ತಿಂಗಳಿಗೆ ರೂ.15,000/-ಗಳ ಗೌರವಧನ ಮತ್ತು ರೂ.2,000/-ಗಳ ಪ್ರಯಾಣ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಸರ್ಕಾರದಿಂದ ಕಾಲ ಕಾಲಕ್ಕೆ ಪರಿಷ್ಕರಿಸಿ ಹೊರಡಿಸುವ ಆದೇಶಗಳು ಅನ್ವಯವಾಗುತ್ತವೆ.

(ii) ಸರ್ಕಾರದ ಆದೇಶ ಸಂ: ಆನಾಸ 65 ಸಲಫ 2012 ದಿನಾಂಕ: 21.02.2014 ರನ್ವಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅರೆಕಾಲಿಕ ಸದಸ್ಯರು/ಮಹಿಳಾ ಸದಸ್ಯರಾಗಿ ಆಯ್ಕೆಗೊಂಡವರು ಒಂದು ದಿನಕ್ಕೆ ಗೌರವಧನ ರೂ.600/- ಮತ್ತು ರೂ.150/-ಗಳ ಪ್ರಯಾಣ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಸರ್ಕಾರದಿಂದ ಕಾಲ ಕಾಲಕ್ಕೆ ಪರಿಷ್ಕರಿಸಿ ಹೊರಡಿಸುವ ಆದೇಶಗಳು ಅನ್ವಯವಾಗುತ್ತವೆ. ಉ. ಆಯ್ಕೆ ವಿಧಾನ ಗ್ರಾಹಕ ಸಂರಕ್ಷಣಾ ಕಾಯ್ದೆ 1986ರ ಕಲಂ 10(1A) ರಡಿಯಲ್ಲಿನ ಆಯ್ಕೆ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 3. ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿವರ

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರು/ಪೂರ್ಣಕಾಲಿಕ ಸದಸ್ಯರು/ಅರೆಕಾಲಿಕ ಸದಸ್ಯರು/ಪೂರ್ಣಕಾಲಿಕ ಮಹಿಳಾ ಸದಸ್ಯರು/ಅರೆಕಾಲಿಕ ಮಹಿಳಾ ಸದಸ್ಯರ ಹುದ್ದೆಗಳಿಗೆ ಆಧ್ಯತೆ ನೀಡಿರುವ ಜಿಲ್ಲಾ ವೇದಿಕೆಗಳ ಹೆಸರುಗಳನ್ನು ಸ್ಪಷ್ಟವಾಗಿ ನಮೂದಿಸಿ ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ ಇತರೆ ಪೂರ್ಣ ವಿವರವಗಳನ್ನು ಭರ್ತಿ ಮಾಡಿ ಹಾಗೂ ಅನುಭವಕ್ಕೆ ಸಂಬಂಧಪಟ್ಟ ಅಗತ್ಯ ದಾಖಲೆಗಳ ದೃಡೀಕೃತ ಪ್ರತಿಗಳ ಜೊತೆಗೆ ರೂ.100/-ಗಳ ಭಾರತೀಯ ಪೋಸ್ಟಲ್ ಆರ್ಡರ್/ಡಿ.ಡಿ.ಯನ್ನು ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿಗಳು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಬಸವ ಭವನ, ಬೆಂಗಳೂರು, ಇವರ ಹೆಸರಿನಲ್ಲಿ ಪಡೆದು ಅರ್ಜಿಯಲ್ಲಿ ಶುಲ್ಕದವ ವಿವರಗಳನ್ನು ಬರೆದು ಲಗತ್ತಿಸಿ, ದಿನಾಂಕ: 15.07.2019ರ ಸಂಜೆ 5-00 ಘಂಟೆಯೊಳಗಾಗಿ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಬಸವ ಭವನ, ಹೈ ಗ್ರೌಂಡ್ಸ್, ಬೆಂಗಳೂರು 560001 ಇವರಿಗೆ ತಲುಪುವಂತೆ ಸಲ್ಲಿಸುವುದು.

ಒಂದಕ್ಕಿಂತ ಹೆಚ್ಚು ಜಿಲ್ಲಾ ಗ್ರಾಹಕರ ವೇದಿಕೆಗಳ ಅಧ್ಯಕ್ಷರ, ಪೂರ್ಣಕಾಲಿಕ ಸದಸ್ಯರ, ಅರೆಕಾಲಿಕ ಸದಸ್ಯರು ಹಾಗೂ ಮಹಿಳಾ ಪೂರ್ಣಕಾಲಿಕ /ಅರೆಕಾಲಿಕ

ಸದಸ್ಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಸಿದಲ್ಲಿ ಒಂದೇ ಅರ್ಜಿಯಲ್ಲಿ ಸಂಬಂಧಿಸಿದ ಜಿಲ್ಲಾ ಗ್ರಾಹಕ ವೇದಿಕೆಯ ಹೆಸರನ್ನು ನಮೂದಿಸತಕ್ಕದ್ದು. ಪ್ರತ್ಯೇಕ ಅರ್ಜಿ

ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಯ್ಕೆ ಸಮಿತಿಯು ಈ ಅಧಿಸೂಚನೆಯನ್ನು ಹಿಂಪಡೆಯುವ ಅಥವಾ ರದ್ದುಮಾಡುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ. ನಿಗದಿತ ದಿನಾಂಕ ಹಾಗೂ ಸಮಯದ ನಂತರ ಅಂಚೆ/ಕೊರಿಯರ್ ಮೂಲಕ ಅಥವಾ ನೇರವಾಗಿ ಮತ್ತು ಅಪೂರ್ಣ ವಿವರಗಳೊಂದಿಗೆ ಬದಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಿಗದಿತ ಅರ್ಜಿ ನಮೂನೆಯು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ವೆಬ್‌ಸೈಟ್ http://kscdrc.kar.nic.in ನಲ್ಲಿ ಲಭ್ಯವಿದ್ದು, ಸಂಬಂಧಪಟ್ಟ ಅರ್ಹ ಅಭ್ಯರ್ಥಿಗಳು ವೆಬ್‌ಸೈಟಿನಿಂದ ನೇರವಾಗಿ ಅಥವಾ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಕಛೇರಿಯಲ್ಲಿ ಪ್ರತಿ ಅರ್ಜಿಗೆ ರೂ.50/-ಗಳನ್ನು ಪಾವತಿ ಮಾಡಿ ಅರ್ಜಿಯನ್ನು ಪಡೆದುಕೊಳ್ಳಬಹುದು.

ಮಾನ್ಯ ಅಧ್ಯಕ್ಷರ/ಆಯ್ಕೆ ಸಮಿತಿ ಆದೇಶಾನುಸಾರ ರಾಜು.ಎನ್

PR-171

SC-02

ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿಗಳು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರು

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.

Cite this issue. Karnataka Gazette, Government of Karnataka, 13 June 2019. Indian Gazettes, https://egazette.servantsofknowledge.in/details/in.gazette.karnataka_new.2019-06-13.Part-5/. Archive identifier in.gazette.karnataka_new.2019-06-13.Part-5.