Servants of Knowledge
Karnataka Gazette · Government of Karnataka

Karnataka Gazette, Part Part-5, 15 August 2019

Published 15 August 2019

Part
Part-5
Identifier
in.gazette.karnataka_new.2019-08-15.Part-5
Languages
English, Kannada
Published at
Original source ↗

click here for IIIF manifest

ಸಂಪುಟ ೧೫೪

Volume 154

ಬೆಂಗಳೂರು, ಗುರುವಾರ, ಆಗಸ್ಟ್ ೧೫, ೨೦೧೯ (ಶ್ರಾವಣ ೨೪, ಶಕ ವರ್ಷ ೧೯೪೧)

Bengaluru, Thursday, August 15, 2019 (Shravana 24, Shaka Varsha 1941)

ಸಂಚಿಕೆ ೩೩

Issue 33

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ

ನೇಮಕಾತಿ ಪ್ರಕಟಣೆ

ಅಧಿಸೂಚನೆ ಸಂಖ್ಯೆ: ಎಡಿಎಂ/19/2019, ರಾಮನಗರ, ದಿನಾಂಕ: 22.07.2019.

ವಿಷಯ : ಶೀಘ್ರಲಿಪಿಗಾರರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ.

ಉಲ್ಲೇಖ : 1) ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆ: ಎಲ್‌ಸಿಎ-II 128/2012, ದಿನಾಂಕ: 18.09.2018.

2) ಈ ಕಛೇರಿ ಅಧಿಸೂಚನೆ ಸಂಖ್ಯೆ: ಎಡಿಎಂ/19/2018, ದಿನಾಂಕ: 29.12.2018ರ ಅನ್ವಯ ಉಳಿದಿರುವ

ಶೀಘ್ರಲಿಪಿಗಾರರು ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ.

* * * * * *

ಮೇಲ್ಕಂಡ ಅಧಿಸೂಚನೆಯನ್ವಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಹಾಗೂ ಹಿಂಬಾಕಿ ಉಳಿದಿರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ರಾಮನಗರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್

https://districts.ecourts.gov.in/Ramanagara-onlinerecruitment

or

http://karnatakajudiciary.kar.nic.in/districtRecruitment.asp

ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ: 05.08.2019 ರಿಂದ 30.08.2019ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.

ಖಾಲಿ ಇರುವ ಹುದ್ದೆಗಳ ವಿವರಗಳು :

I.

ಶೀಘ್ರಲಿಪಿಗಾರರ ಹುದ್ದೆ :

1. ಹುದ್ದೆಗಳ ಸಂಖ್ಯೆ : 05

2. ವೇತನ ಶ್ರೇಣಿ – 27650-650-29600-750-32600-850-36000-950-39800-1100-46400-1250-52650 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.

(೧೨೨೫)೧೨೨೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೧೫, ೨೦೧೯ ಭಾಗ ೫

ಮೀಸಲಾತಿ ವ ರ್ಗೀಕರಣ ಒಟ್ಟು
ಮಹಿಳೆ ಗ್ರಾಮೀಣ ಅಬ್ಯರ್ಥಿ ಯೋ.ನಿ.ಅ.
ಸಾಮಾನ್ಯ ಅಭ್ಯರ್ಥಿ - 01 01 02
ಪ ರಿಶಿಷ್ಟ ಜಾತಿ 01* - - 01
ಪ ವ ್ರ ಗ ರ್ - II(A) - 01 - 01
ಪ ವ ್ರ ಗ ರ್ - II(B) 01 - - 01
ಒಟ್ಟು 02 02 01 05

* ಹಿಂಬಾಕಿ ಹುದ್ದೆ

4. ಶೈಕ್ಷಣಿಕ ವಿದ್ಯಾರ್ಹತೆ :

ಎ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಬಿ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ (Senior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.

ಸಿ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯುು ನಡೆಸುವ ಹಿರಿಯ (Senior Grade) ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮೊ ಇನ್ ಸೆಕ್ರೆಟೇರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ) :

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ

2ಎ, 2ಬಿ, 3ಎ, 3ಬಿ - 38 ವರ್ಷ

ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ

ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ :

ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

II. ಶೀಘ್ರಲಿಪಿಗಾರರ ಹುದ್ದೆಗೆ ಈ ಕೆಳಕಂಡ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು.

ಅ) ಒಂದು ನಿಮಿಷಕ್ಕೆ 120 ಶಬ್ಧಗಳಂತೆ 5 ನಿಮಿಷಗಳ ಅವಧಿಯ ಉಕ್ತಲೇಖನ ಮತ್ತು ಅದನ್ನು ಲಿಪ್ಯಂತರ ಮಾಡಲು 45 ನಿಮಿಷಗಳ ಅವಧಿ.

(ಗರಿಷ್ಠ 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗಿರುತ್ತದೆ).

ಆ) ಶೀಘ್ರಲಿಪಿಗಾರರ ಹುದ್ದೆಗೆ ಅವರು ಪಡೆದಿರುವ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಐದು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಟಿಪ್ಪಣಿ : ಸಂದರ್ಶನವು 05 ಅಂಕಗಳನ್ನು ಒಳಗೊಂಡಿರುತ್ತದೆ.

ಪರಿವೀಕ್ಷಣಾ ಅವಧಿ :

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ನಿರಾಕ್ಷೇಪಣ ಪ್ರಮಾಣ ಪತ್ರವನ್ನು ಪಡೆದಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ `. 200/-
ಪ ವ ್ರ ಗ ರ್-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ `. 100/-
ಪ ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೧೫, ೨೦೧೯ ೧೨೨೭

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್ https://districts.ecourts.gov.in/Ramanagara-onlineRecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು :

1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮೂಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.

3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5 cm ಉದ್ದ x 3.6 cm ಅಗಲವುಳ್ಳದ್ದಾಗಿರಬೇಕು ಮತ್ತು 50 kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.

ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).


  1. ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/Ramanagara-onlineRecruitment ನಲ್ಲಿ ದಿನಾಂಕ: 30.08.2019ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ: 30.08.2019ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ. ಮತ್ತು ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ: 31.08.2019 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು. 7. ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. 8. ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:- ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ. ಆ) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು. ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು. ಈ) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ-1 ಮತ್ತು 2ರಲ್ಲಿ(ಮೀಸಲಾತಿ ಕೋರಿದ್ದಲ್ಲಿ) ಉ) ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಹಾಗೂ ವಯೋಮಿತಿ ರಿಯಾಯಿತಿ ಕೋರಲು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ. ಊ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರ ಹಾಗೂ ಶಾಲಾ ನಡತೆ ಪ್ರಮಾಣ ಪತ್ರಗಳು. ಋು) ನಿರಾಕ್ಷೇಪಣಾ ಪತ್ರ (ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ). 9. ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ↩
  2. kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು) ಅಪ್‌ಲೋಡ್ ಮಾಡಬೇಕು. 4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು. 5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ. ↩

R.N.I. No. KARBIL/2001/47147 POSTAL REGN. No. RNP/KA/BGS/2202/2017-19

Licensed to post without prepayment WPP No. 297

೧೨೨೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೧೫, ೨೦೧೯ ಭಾಗ ೫

10. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.

PR - 259

ಉಮಾ. ಎಂ.ಜಿ.

SC - 10

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ರಾಮನಗರ.

FORM-IV

(See Rule 12)

NOTICE

Dated : 21-04-2018

It is hereby notified that the undersigned has changed his nam e from VASUDEV SADANAND APPAJI S/o Kallappa to VASUDEV KALLAPPA APPAJIGOL

PD-C/N-50

VASUDEV SADANAND APPAJI S/o Kallappa

SC - 10

ಸೂಚನೆ: ಮೇಲ್ಕಂಡ ಅಧಿಸೂಚನೆಯು ಕರ್ನಾಟಕ ರಾಜ್ಯ ಪತ್ರ ದಿನಾಂಕ: 09-08-2018ರಂದು ಪುಟ ಸಂಖ್ಯೆ 1299ರ ಭಾಗ 5ರಲ್ಲಿ PD-C/N50 ಪ್ರಕಟಣೆಯಾಗಿದ್ದು, ಇದರಲ್ಲಿ ತಾಂತ್ರಿಕ ದೋಷದಿಂದ ಕೂಡಿದ್ದು ಸದರಿ ಅಧಿಸೂಚನೆಯನ್ನು ಸರಿಪಡಿಸಿ ಈಗ ಮರು ಪ್ರಕಟಿಸಲಾಗುತ್ತಿದೆ. ದಿನಾಂಕ: 09-08-2018ರಂದು ಪ್ರಕಟಿಸಲಾಗಿರುವ ಅಧಿಸೂಚನೆ ಪರಿಗಣಿಸಬಾರದೆಂದು ತಿಳಿಸಿದೆ.

FORM-IV

(See Rule 12)

NOTICE

Dated : 08-12-2018

It is hereby notified that the undersigned has changed his nam e from BABU MALLESHI SAPTASAGARE to BABURAO BHAU MANE.

PD-C/N-99

BABU MALLESHI SAPTASAGARE

SC - 10

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.

Cite this issue. Karnataka Gazette, Government of Karnataka, 15 August 2019. Indian Gazettes, https://egazette.servantsofknowledge.in/details/in.gazette.karnataka_new.2019-08-15.Part-5/. Archive identifier in.gazette.karnataka_new.2019-08-15.Part-5.